alex Certify BIG NEWS : ರಾಜ್ಯದ ರೈತರೇ ಗಮನಿಸಿ : ಇನ್ಮುಂದೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೊಂದಾಯಿಸುವುದು ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ರೈತರೇ ಗಮನಿಸಿ : ಇನ್ಮುಂದೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೊಂದಾಯಿಸುವುದು ಕಡ್ಡಾಯ

ಕೃಷಿಕರು ಸರ್ಕಾರದ ಸೌಲಭ್ಯವನ್ನು ಪಡೆಯಲು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಆಧಾರ್ ಕಾರ್ಡ್ ಜೊತೆಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿದೆ. ಆ ನಿಟ್ಟಿನಲ್ಲಿ ರೈತರು ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.

Farmer Registration and Unified Beneficiary Information System-fruits ಸರ್ಕಾರದ ವತಿಯಿಂದ ಅಭಿವೃದ್ದಿಗೊಳಿಸಲಾಗಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ರೈತರು ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಗುರುತಿನ ಸಂಖ್ಯೆ (ಎಫ್ಐಡಿ) ಪಡೆಯಬಹುದು ಎಂದು ಹೇಳಿದರು.

ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕಂದಾಯ ಇಲಾಖೆ ಮತ್ತು ಇತರೆ ಸಂಬಂಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಪಡೆಯಲು ಮತ್ತು ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆ ಹಾನಿ ಪರಿಹಾರ, ಬ್ಯಾಂಕ್ ಸಾಲ ಪಡೆಯಲು ಹಾಗೂ ಇತರೆ ಯೋಜನೆಗಳಿಗೆ ಫ್ರೂಟ್ಸ್ ತಂತ್ರಾಂಶದಲ್ಲಿರುವ ವಿವರಗಳನ್ನು ಬಳಸಲಾಗುವುದು ಎಂದರು.

ಕೊಡಗು ಜಿಲ್ಲೆಯಲ್ಲಿ ಭೂಮಿ ತಂತ್ರಾಂಶದಲ್ಲಿ ಒಟ್ಟು ಸೇರ್ಪಡೆಯಾಗಿರುವ ತಾಕು ಸಂಖ್ಯೆ 3,26,776. ಸರ್ಕಾರದ ಅಧೀನದಲ್ಲಿರುವ ಹಾಗೂ ಕೃಷಿಯೇತರ ಭೂಮಿಗಳು(ಎನ್.ಎ) ಹಾಗೂ ಇತರೆ ತಾಕುಗಳನ್ನು ಹೊರತುಪಡಿಸಿ ಫ್ರೂಟ್ಸ್ ತಂತ್ರಾಂಶದಲ್ಲಿ ಸೇರ್ಪಡೆಗೊಳಿಸಬೇಕಾಗಿರುವ ತಾಕುಗಳ ಒಟ್ಟು ಸಂಖ್ಯೆ 2,69,901. ಈಗಾಗಲೇ 1,47,621 ತಾಕುಗಳು ಸೇರ್ಪಡೆಗೊಂಡಿದ್ದು, ಫ್ರೂಟ್ಸ್ ತಂತ್ರಾಂಶದಲ್ಲಿ 1,29,976 ಸರ್ವೇ ನಂಬರ್ಗಳು ಸೇರ್ಪಡೆಯಾಗಲು ಬಾಕಿ ಇದೆ ಎಂದು ವೆಂಕಟ್ ರಾಜಾ ಅವರು ವಿವರಿಸಿದರು.

ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ ಎಫ್ಐಡಿ ಗೆ ಸೇರಿಸಲು ಮತ್ತು ಯಾವ ರೈತರು ಇಲ್ಲಿಯವರೆಗೆ ಎಫ್ಐಡಿ ಯನ್ನು ಮಾಡಿಸಿಕೊಂಡಿಲ್ಲವೋ ಅವರು ತಮ್ಮ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

ಎಫ್ಐಡಿ ಯನ್ನು ಮಾಡಿಸಲು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನುಗಳ ಪಹಣಿ ಪ್ರತಿಗಳು, ರೈತರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ತಮ್ಮ ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ (ಪರಿಶಿಷ್ಟ ವರ್ಗದ ರೈತರಿಗೆ ಕಡ್ಡಾಯ) ಪಾಸ್ಪೋರ್ಟ್ ಅಳತೆಯ ಒಂದು ಭಾವಚಿತ್ರ. ದಾಖಲಾತಿಗಳು ಅವಶ್ಯವಾಗಿದೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...