alex Certify ವಾಹನ ಸವಾರರ ಗಮನಕ್ಕೆ : ಇಂದಿನಿಂದ ಬೆಂಗಳೂರಲ್ಲಿ 3 ದಿನ ಕಂಬಳ , ಸಂಚಾರ ಮಾರ್ಗ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರ ಗಮನಕ್ಕೆ : ಇಂದಿನಿಂದ ಬೆಂಗಳೂರಲ್ಲಿ 3 ದಿನ ಕಂಬಳ , ಸಂಚಾರ ಮಾರ್ಗ ಬದಲಾವಣೆ

ಇಂದಿನಿಂದ ಮೂರು ದಿನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಬಳ ನಡೆಯಲಿದ್ದು, ಲಕ್ಷಾಂತರ ಮಂದಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅರಮನೆ ಮೈದಾನ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ..

ನವೆಂಬರ್ 25ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳಕ್ಕೆ ಚಾಲನೆ ಸಿಗಲಿದೆ. ಕಂಬಳದಲ್ಲಿ ಭಾಗವಹಿಸಲು 228 ಜೋಡಿ ಕೋಣಗಳು ನೋಂದಣಿಯಾಗಿವೆ.

ಈ ಕೆಳಕಂಡ ರಸ್ತೆಗಳನ್ನು ಬಳಸಬೇಡಿ

ಬಳಸದೇ ಬದಲೀ ಮಾರ್ಗದಲ್ಲಿ ಸಂಚರಿಸಲು ಕೋರಿದೆ.
ಅರಮನೆ ರಸ್ತೆ: ಮೈಸೂರು ಬ್ಯಾಂಕ್ ಸರ್ಕಲ್ನಿಂದ ವಸಂತನಗರ ಅಂಡರ್ ಪಾಸ್ವರೆಗೆ.
ಎಂ.ವಿ ಜಯರಾಮ ರಸ್ತೆ : ಅರಮನೆ ರಸ್ತೆ, ಬಿ.ಡಿ.ಎ. ಜಂಕ್ಷನ್ ನಿಂದ ಚಕ್ರವರ್ತಿ ಲೇಔಟ್ ಸೇರಿದಂತೆ ವಸಂತನಗರ ಅಂಡರ್ಪಾಸ್ ನಿಂದ ಹಳೆ ಉದಯ ಟಿವಿ ಜಂಕ್ಷನ್ವರೆಗೆ (ಎರಡು ದಿಕ್ಕಿನಲ್ಲಿ).
ಬಳ್ಳಾರಿ ರಸ್ತೆ: ಮೇಕ್ರಿ ವೃತ್ತ ದಿಂದ ಎಲ್.ಆರ್.ಡಿ.ಇ ಜಂಕ್ಷನ್ವರೆಗೆ
ಕನ್ನಿಂಗ್ಹ್ಯಾಂ ರಸ್ತೆ: ಬಾಳೇಕುಂದ್ರಿ ಸರ್ಕಲ್ ನಿಂದ ಲೀ-ಮೆರಿಡಿಯನ್ ಅಂಡರ್ ಪಾಸ್ವರೆಗೆ.
ಮಿಲ್ಲರ್ಸ್ ರಸ್ತೆ: ಹಳೆ ಉದಯ ಟಿ.ವಿ ಜಂಕ್ಷನ್ ನಿಂದ ಎಲ್.ಆರ್.ಡಿ.ಇ ಜಂಕ್ಷನ್ ವರೆಗೆ.
ಜಯಮಹಲ್ ರಸ್ತೆ: ಜಯಮಹಲ್ ರಸ್ತೆ ಹಾಗೂ ಬೆಂಗಳೂರು ಅರಮನೆ ಸುತ್ತಮುತ್ತಲ ರಸ್ತೆಗಳು.

ಸಿಬಿಡಿ ಏರಿಯಾ ದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ಮೇಕ್ರಿ ಸರ್ಕಲ್ ಬಳಿ ಯು ತಿರುವು ಪಡೆದು ಮೇಕ್ರಿ ಸರ್ಕಲ್ ಗೇಟ್ ನಂ-01 (ಕೃಷ್ಣವಿಹಾರ್) ರಲ್ಲಿ ಪ್ರವೇಶಿಸಿ, ವಾಹನಗಳನ್ನು ಪಾರ್ಕ್ ಮಾಡಿ ನಂತರ ಕಾರ್ಯಕ್ರಮದ ಸ್ಥಳಕ್ಕೆ ನಡೆದುಕೊಂಡು ಹೋಗಲು ಸೂಚಿಸಲಾಗಿದೆ. ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಕ್ರಿ ಸರ್ಕಲ್ ಅಂಡರ್ ಪಾಸ್ ನಲ್ಲಿ ಬಂದು ಗೇಟ್ ನಂ-01 ಕೃಷ್ಣವಿಹಾರ್ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾರ್ಯಕ್ರಮದ ಸ್ಥಳವನ್ನು ನಡೆದು ತಲುಪುವಂತೆ ಸೂಚಿಸಲಾಗಿದೆ.

ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ

ಜಯರಾಮ್ ರಸ್ತೆ, ಸಿ.ವಿ.ರಾಮನ್ ರಸ್ತೆ, ವಸಂತನಗರ ರಸ್ತೆ, ತರಳಬಾಳು ರಸ್ತೆ, ಮೌಂಟ್ ಕಾರ್ಮಲ್ ಕಾಲೇಜು ರಸ್ತೆ. ಪ್ಯಾಲೇಸ್ ರಸ್ತೆ, ನಂದಿದುರ್ಗ ರಸ್ತೆ, ಎಂ.ವಿ ಜಯರಾಮ್ ರಸ್ತೆ, ಜಯಮಹಲ್ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ.ರಾಮನ್ರಸ್ತೆ, ರಮಣ ಮಹರ್ಷಿ ರಸ್ತೆ, ಭಾರೀ ಸರಕು ಸಾಗಾಣಿಕಾ ವಾಹನಗಳ ಸಂಚಾರವನ್ನು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ & ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...