HomeKarnatakaಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಸರ್ವಾಂಗೀಣ ಶಿಕ್ಷಣಕ್ಕೆ ಶಾಲೆಗಳಿಗೆ ಪುಸ್ತಕ, ನಿಯತಕಾಲಿಕೆ, ಸ್ಮಾರ್ಟ್ ಕ್ಲಾಸ್ ರೂಂ

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಸರ್ವಾಂಗೀಣ ಶಿಕ್ಷಣಕ್ಕೆ ಶಾಲೆಗಳಿಗೆ ಪುಸ್ತಕ, ನಿಯತಕಾಲಿಕೆ, ಸ್ಮಾರ್ಟ್ ಕ್ಲಾಸ್ ರೂಂ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಸರ್ವಾಂಗಣ ಶಿಕ್ಷಣಕ್ಕೆ ಆದ್ಯತೆ ನೀಡಲು 24,347 ಶಾಲೆಗಳಿಗೆ ಪುಸ್ತಕ, ನಿಯತಕಾಲಿಕೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು. ಅಲ್ಲದೇ, 50 ಕೋಟಿ ರೂ. ವೆಚ್ಚದಲ್ಲಿ 47 ಕಸ್ತೂರ ಬಾ ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್ ರೂಮ್ ಅಭಿವೃದ್ಧಿಪಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡಿರುವುದಾಗಿ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023 -24 ನೇ ಸಾಲಿಗೆ 17 ಜಿಲ್ಲೆಗಳ 93 ತಾಲ್ಲೂಕುಗಳಲ್ಲಿನ 24,347 ಶಾಲೆಗಳಿಗೆ ಪ್ರಯೋಜನ ಸಿಗಲಿದೆ. 14,049 ಕಿರಿಯ ಪ್ರಾಥಮಿಕ ಶಾಲೆಗಳು, 8344 ಹಿರಿಯ ಪ್ರಾಥಮಿಕ ಶಾಲೆಗಳು, 1830 ಪ್ರೌಢಶಾಲೆಗಳು, 76 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಯೋಜನೆಯ ಪ್ರಯೋಜನ ಸಿಗಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಸ್ತೂರ ಬಾ ಗಾಂಧಿ ಬಾಲಿಕಾ ಹಾಸ್ಟೆಲ್ ಗಳಲ್ಲಿ ಡಾರ್ಮಿಟರಿ ನಿರ್ಮಾಣ, ವಸತಿ ಶಾಲೆಗಳ ದುರಸ್ತಿ, ಸ್ಮಾರ್ಟ್ ಕ್ಲಾಸ್ ರೂಮ್ ಅಭಿವೃದ್ಧಿ. ಕಾಟ್ ಗಳ ಖರೀದಿಗೆ ಒಟ್ಟು 50 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular