HomeKarnatakaBREAKING : ಉಡುಪಿಯಲ್ಲಿ ಘೋರ ದುರಂತ : ಮಲಗಿದ್ದಾಗಲೇ ಟಿಪ್ಪರ್ ಹರಿದು ಕಾರ್ಮಿಕ ಸ್ಥಳದಲ್ಲೇ ಸಾವು

BREAKING : ಉಡುಪಿಯಲ್ಲಿ ಘೋರ ದುರಂತ : ಮಲಗಿದ್ದಾಗಲೇ ಟಿಪ್ಪರ್ ಹರಿದು ಕಾರ್ಮಿಕ ಸ್ಥಳದಲ್ಲೇ ಸಾವು

ಉಡುಪಿ :  ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸೋಮೇಶ್ವರ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.

ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಲಾರಿ ಕಾರ್ಮಿಕ ಶಿವರಾಜ್ ಎಂಬುವವರ ಮೇಲೆ ಟಿಪ್ಪರ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಿಪ್ಪರ್ ಚಾಲಕ ಪೆಟ್ರೋಲ್ ಹಾಕಿಸಿಕೊಂಡು ಹೋಗುವಾಗ ಪೆಟ್ರೋಲ್ ಬಂಕ್ ಮಲಗಿದ್ದ ಕಾರ್ಮಿಕನ ಮೇಲೆಯೇ ಚಾಲಕ ಟಿಪ್ಪರ್ ಹರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿವಮೊಗ್ಗ ಮೂಲದ ಕಾರ್ಮಿಕ ಶಿವರಾಜ್ ನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾದರೂ ಅಷ್ಟರಲ್ಲೇ ಆತ ಮೃತಪಟ್ಟಿದ್ದನು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular