ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರು ನೇಮಕ ಮಾಡಲಾಗಿದೆ. ಎರಡು ತಿಂಗಳ ಅವಧಿಗೆ ಜಯಪ್ರಕಾಶ್ ಹೆಗ್ಡೆ ಮರು ನೇಮಕ ಮಾಡಲಾಗಿದೆ.
ಜನವರಿ 31ರವರೆಗೆ ಮರು ನೇಮಕಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ವಿಸ್ತರಣೆಗೆ ಅವಕಾಶ ಇಲ್ಲದ ಕಾರಣ ಹಾಲಿ ಅಧ್ಯಕ್ಷರನ್ನೇ ಮರುನೇಮಕ ಮಾಡಲಾಗಿದೆ.
ಜನವರಿ 31ರವರೆಗೆ ಮರುನೇಮಕಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.
ಈ ಮೂಲಕ ರಾಜ್ಯದಲ್ಲಿ ಜಾತಿ ಗಣತಿ ವರದಿ ಚರ್ಚೆ ತಾರಕಕ್ಕೇರಿರುವ ಹೊತ್ತಲ್ಲೇ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆಯೋಗದ ಅಧ್ಯಕ್ಷರು, ಸದಸ್ಯರ ಅವಧಿಯನ್ನು ವಿಸ್ತರಣೆ ಮಾಡಲಾಗದ ಕಾರಣ ಮರು ನೇಮಕ ಮಾಡಲಾಗಿದೆ. ಹೀಗಾಗಿ ಸದ್ಯಕ್ಕೆ ಸಮೀಕ್ಷಾ ವರದಿ ಸರ್ಕಾರದ ಕೈ ಸೇರುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ.