HomeKarnatakaರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 30 ಸಾವಿರ...

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 30 ಸಾವಿರ ರೂ. ಸಹಾಯಧನ!

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳಾದ ಉದ್ಯೋಗಿನಿ ಯೋಜನೆ ಮತ್ತು ಚೇತನಾ ಯೋಜನೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಡಿ ಭೌತಿಕ ಮತ್ತು ಆರ್ಥಿಕ ಗುರಿ ನಿಗದಿ ಪಡಿಸಿದ್ದು, ಈ ಯೋಜನೆಗಳಿಗೆ ಮಹಿಳಾ ಫಲಾನುಭವಿಗಳು ಗ್ರಾವi ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿ.22 ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗಿನಿ ಯೋಜನೆ

ಈ ಯೋಜನೆಯಡಿ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.

ಚೇತನ ಯೋಜನೆ

ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಧನಶ್ರೀ ಯೋಜನೆ

ಹೆಚ್.ಐ.ವಿ. ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.30 ಸಾವಿರಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ

ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ

 ಈ ಯೋಜನೆಯಡಿ 1993-94 ಮತ್ತು 2007-08ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ಸೂಚನೆಗಳು: ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಉದ್ಯೋಗಿನಿ ಯೋಜನೆಯ ಎಸ್‍ಸಿಎಸ್‍ಪಿ/ಟಿಎಸ್‍ಪಿ ಬಳಕೆಯಾದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಬಹುದು. ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ಅರ್ಜಿದಾರರು ಸಚಿವರು, ಶಾಸಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಹಿಂದೆ ಮೇಲ್ಕಂಡ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular