ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 9 ಸಾವಿರ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಕಳೆದ 7 ವರ್ಷಗಳಿಂದ ನೇಮಕಾತಿ ಆಗಿಲ್ಲ. ಈ ಅವಧಿಯಲ್ಲಿ 13 ಸಾವಿರ ಸಿಬ್ಬಂದಿ ನಿವೃತ್ತಿಯಾಗಲಿದ್ದು,9 ಸಾವಿರ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು 4 ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 5,500 ಹೊಸ ಬಸ್ ಗಳ ಖರೀದಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಇಡೀ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿದೆ. ಸಾರಿಗೆ ಸಂಸ್ಥೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ ಎಂದು ಹೇಳಿದ್ದಾರೆ.