HomeKarnataka12,000 ಅಂಗನವಾಡಿಗಳಿಗೆ ಸಂಕಷ್ಟ: 8 ತಿಂಗಳಿಂದ ಪಾವತಿಯಾಗದ ಬಾಡಿಗೆ: 4 ತಿಂಗಳಿಂದ ಕಾರ್ಯಕರ್ತೆಯರು, ಸಹಾಯಕರಿಗೆ ಗೌರವಧನವೂ...

12,000 ಅಂಗನವಾಡಿಗಳಿಗೆ ಸಂಕಷ್ಟ: 8 ತಿಂಗಳಿಂದ ಪಾವತಿಯಾಗದ ಬಾಡಿಗೆ: 4 ತಿಂಗಳಿಂದ ಕಾರ್ಯಕರ್ತೆಯರು, ಸಹಾಯಕರಿಗೆ ಗೌರವಧನವೂ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ಇವುಗಳಿಗೆ ಕಳೆದ 8 ತಿಂಗಳಿಂದ ಬಾಡಿಗೆ ಪಾವತಿಸಿಲ್ಲ. ಇದರಿಂದಾಗಿ ಅಂಗನವಾಡಿ ಕೇಂದ್ರಗಳು ಸಂಕಷ್ಟ ಎದುರಿಸುವಂತಾಗಿದೆ.

ಬಾಡಿಗೆ ಪಾವತಿಸದ ಕಾರಣ ಕಟ್ಟಡ ಮಾಲೀಕರು ಖಾಲಿ ಮಾಡುವಂತೆ ಒತ್ತಡ ಹೇರುತ್ತಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಒತ್ತಡ ಎದುರಿಸುವಂತಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿ ರಾಜ್ಯದಲ್ಲಿ 69,899 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 12,393 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರ ಪ್ರದೇಶದ ಅಂಗನವಾಡಿ ಕೇಂದ್ರಕ್ಕೆ 4,000 ರೂ., ಗ್ರಾಮೀಣ ಪ್ರದೇಶದ ಅಂಗನವಾಡಿ ಕೇಂದ್ರಕ್ಕೆ ಒಂದು ಸಾವಿರ ರೂಪಾಯಿ ಬಾಡಿಗೆ ಪಾವತಿಸಲಾಗುತ್ತಿದೆ. ಸರ್ಕಾರದಿಂದ ಅಂಗನವಾಡಿ ಕೇಂದ್ರಗಳ ಬಾಡಿಗೆಯಾಗಿ ಸುಮಾರು 3.43 ಕೋಟಿ ರೂ. ಬಾಡಿಗೆ ಪಾವತಿಸಬೇಕಿದೆ.

ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಶೇಕಡ 60: 40 ಅನುಪಾತದಲ್ಲಿ ಅನುದಾನ ಬಿಡುಗಡೆಯಾಗುತ್ತಿದ್ದು, ಕಳೆದ ಮಾರ್ಚ್ ನಂತರ ಬಾಡಿಗೆ ಹಣ ಬಿಡುಗಡೆಯಾಗಿಲ್ಲ. ಬಾಡಿಗೆ ನೀಡದ ಕಾರಣಕ್ಕೆ ಕಟ್ಟಡಗಳ ಮಾಲೀಕರು ಅಂಗನವಾಡಿ ಕೇಂದ್ರಗಳನ್ನು ಖಾಲಿ ಮಾಡಲು ಒತ್ತಡ ಹೇರುತ್ತಿದ್ದಾರೆ.

ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ ಅನುದಾನ ಬಂದ ನಂತರ ಬಾಡಿಗೆ ನೀಡುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಒತ್ತಡ ಎದುರಾಗಿದೆ. ಇನ್ನು ಸರ್ಕಾರ 4 ತಿಂಗಳಿಂದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ನೀಡಿಲ್ಲವೆಂದು ಹೇಳಲಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯಕ್ರಮ ಕೈಗೊಳ್ಳಬೇಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular