ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಡಿಜಿ & ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಡಿಸಿ ದಯಾನಂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ವಾಗತಿಸಿದರು.
ಹೆಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ವೇಳೆ ತೇಜಸ್ ಜೆಟ್ ಗಳ ಘಟಕ ಹಾಗೂ ಉತ್ಪಾದನಾ ಘಟಕಗಳನ್ನು ಪರಿಶೀಲಿಸಲಿದ್ದಾರೆ.
ವಿಧಾನಸಭಾ ಚುನಾವಣೆ ಬಳಿಕ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಹೆಚ್ಎಎಲ್ ಕಾರ್ಯಕ್ರಮದ ಬಳಿಕ ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ತೆರಳಿದ್ದು, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.