HomeKarnatakaBIG NEWS: ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

BIG NEWS: ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ: ಇತ್ತೀಚೆಗಷ್ಟೇ ಬೆಳಗಾವಿ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ ಇದೀಗ ದಂಡು ಮಂಡಳಿ ಸಿಇಒ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ನಡೆದಿದೆ.

ಬೆಳಗಾವಿ ದಂಡು ಮಂಡಳಿ ಸಿಇಒ ಕೆ.ಆನಂದ್ ಮೃತರು. ಕ್ಯಾಂಪ್ ಪ್ರದೇಶದ ತಮ್ಮ ನಿವಾಸದಲ್ಲಿಯೇ ಕೆ.ಆನಂದ್ ಶವವಾಗಿ ಪತ್ತೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡಿನ ಮೂಲದವರಾದ ಕೆ.ಆನಂದ್, ಕಳೆದ ಒಂದು ವರ್ಷದಿಂದ ಬೆಳಗಾವಿಯ ದಂಡು ಮಂಡಳಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಿಗ್ಗೆ ಎಷ್ಟು ಹೊತ್ತಾದರೂ ಮನೆ ಬಾಗಿಲು ತೆರೆಯದಿದ್ದಾಗ ಸಿಬ್ಬಂದಿಗಳು ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದಾಗ ಕೆ.ಆನಂದ್ ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ಕೆ.ಆನಂದ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ದಂಡು ಮಂಡಳಿಯಲ್ಲಿ ಅಕ್ರಮ ನೇಮಕಾತಿ ಹಾಗೂ ಅಕ್ರಮ ಕಾಮಗಾರಿ ಆರೋಪ ಹಿನ್ನೆಲೆಯಲ್ಲಿ ವಾರದ ಹಿಂದೆ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಮಂಡಳಿಯ ಸಿಇಒ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular