HomeKarnatakaBIG NEWS: ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಡಲು ಹೊರಟ ಸಿಎಂ;...

BIG NEWS: ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಡಲು ಹೊರಟ ಸಿಎಂ; ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆರೋಪ


ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯುವ ಕ್ಯಾಬಿನೇಟ್ ನಿರ್ಧಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರನ್ನು ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ನಿಜವಾಗಿಯೂ ಸತ್ಯ ಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆ ಬಗ್ಗೆ ಏಕೆ ಭಯಪಡಬೇಕು? ತನಿಖೆ ಎದುರಿಸಿ ಸತ್ಯಹರಿಶ್ಚಿಂದ್ರ ಎಂದು ಸಾಬೀತು ಮಾಡಲಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರನ್ನು ರಕ್ಷಣೆ ಮಾಡಿದ್ದರು. ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular