ಆಸ್ಟ್ರೇಲಿಯಾದ ಕ್ರಿಕೆಟಿಗ ಮಿಚೆಲ್ ಮಾರ್ಷ್ ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟುಕೊಂಡು ವಿಶ್ರಾಂತಿ ಪಡೆಯುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು, ಈ ಹಿನ್ನೆಲೆ ಇದೀಗ ಮಿಚೆಲ್ ಮಾರ್ಷ್ ವಿರುದ್ಧ ದೂರು ದಾಖಲಾಗಿದೆ.
ಭ್ರಷ್ಟಾಚಾರ ವಿರೋಧಿ ಸೇನೆಯ ಅಧ್ಯಕ್ಷ ಪಂಡಿತ್ ಕೇಶವ್ ದೇವ್ ಅವರು ಅಲಿಘರ್ನ ದೆಹಲಿ ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ್ದೇವೆ, ಆದರೆ ಇದುವರೆಗೆ ಪ್ರಕರಣ ದಾಖಲಾಗಿಲ್ಲ, ಸೈಬರ್ ಸೆಲ್ನಿಂದ ವರದಿ ಬಂದ ನಂತರವೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಗಾಂಕ್ ಶೇಖರ್ ತಿಳಿಸಿದ್ದಾರೆ.
ಆಸ್ಟ್ರೇಲಿಯಾ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದ ಕೆಲವೇ ಗಂಟೆಗಳ ನಂತರ ಈ ಫೋಟೋ ವೈರಲ್ ಆಗಿತ್ತು. . ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಮುಗ್ಗರಿಸಿದ್ದು, ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸೋಲು ಕಂಡಿತ್ತು.