ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದು, ನವೆಂಬರ್ 29ರಂದು ಆರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ ಕೈಗೊಂಡಿದೆ.
ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 29ರಂದು ಎಲ್ಲಾ ಆರೋಪಿಗಳು ಖುದ್ದು ಹಾಜರಾಗಲು ಕೋರ್ಟ್ ಸೂಚನೆ ನೀಡಿದೆ.