HomeKarnatakaBIG NEWS: ನರೇಗಾ ಯೋಜನೆ ಅನುಷ್ಠಾನದಲ್ಲಿ ಭಾರಿ ಗೋಲ್ ಮಾಲ್; ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ...

BIG NEWS: ನರೇಗಾ ಯೋಜನೆ ಅನುಷ್ಠಾನದಲ್ಲಿ ಭಾರಿ ಗೋಲ್ ಮಾಲ್; ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ರಾಯಚೂರಿನಲ್ಲಿ ನರೇಗಾ ಅನುಷ್ಠಾನದಲ್ಲಿ ಗೋಲ್ ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ರಾಯಚೂರಿನ ದೇವದುರ್ಗದಲ್ಲಿ 33 ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಹಿಂದಿನ ಇಓ ಪಂಪಾಪತಿ ಹಿರೇಮಠ, ಸಹಾಯಕ ನಿರ್ದೇಶಕ ಬಸಣ್ಣ ನಾಯಕ್ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಸಾಮಾಜಿಕ ಪರಿಶೋಧನಾ ನಿರ್ದೇಶಕರಿಂದ ವರದಿ ಸಲ್ಲಿಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಪಂಚಾಯತ್ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ನಿರ್ದೇಶನ ಮೇರೆಗೆ ಈಗಿನ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಅಣ್ಣಾರಾಮ್ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular