alex Certify ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಇಂದು ಸಂವಿಧಾನ ಅಂಗೀಕರಾವಾದ ದಿನ. 1949ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದರು.

ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದು ಹೇಳಿದರು.

ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ದಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ ಅವರು ಕನಸು ಕಂಡಿದ್ದರು. ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...