alex Certify BREAKING : ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ನಟ ದರ್ಶನ್ ಭೇಟಿ : ಆರೋಗ್ಯ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ನಟ ದರ್ಶನ್ ಭೇಟಿ : ಆರೋಗ್ಯ ವಿಚಾರಣೆ

ಬೆಂಗಳೂರು : ಅನಾರೋಗ್ಯದಿಂದ ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ನಟ ದರ್ಶನ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ಆಗಮಿಸಿದ ಚಾಲೆಂಜಿಂಗ್ ಸ್ಟಾರ್ ಹಾಸಿಗೆ ಹಿಡಿದ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಲೀಲಾವತಿ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ.

ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ಛಾಪೂ ಮೂಡಿಸಿರುವ ನಟಿ ಲೀಲಾವತಿ ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ನಿವಾಸಕ್ಕೆ ಇತ್ತೀಚೆಗೆ ನಟ ಧ್ರುವ ಸರ್ಜಾ ಕೂಡ ಆಗಮಿಸಿದ್ದರು. ಅಮ್ಮನಿಗಾಗಿ ಮಗ ವಿನೋದ್ ರಾಜ್ ಕುಮಾರ್ ಇತ್ತೀಚೆಗೆ ಹಾಡು ಹಾಡಿದ ವಿಡಿಯೋ ಕೂಡ ವೈರಲ್ ಆಗಿತ್ತು. ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಬೇಗ ಗುಣಮುಖಲಾಗಲೆಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...