HomeKarnataka2024 ರಲ್ಲಿ ರಾಜ್ಯದಲ್ಲಿ 'ಯುವನಿಧಿ' ಜಾರಿ, ಕೌಶಲ್ಯಾಭಿವೃದ್ಧಿ ತರಬೇತಿ : ಸಿಎಂ ಸಿದ್ದರಾಮಯ್ಯ

2024 ರಲ್ಲಿ ರಾಜ್ಯದಲ್ಲಿ ‘ಯುವನಿಧಿ’ ಜಾರಿ, ಕೌಶಲ್ಯಾಭಿವೃದ್ಧಿ ತರಬೇತಿ : ಸಿಎಂ ಸಿದ್ದರಾಮಯ್ಯ

ತೆಲಂಗಾಣ : 2024 ರಲ್ಲಿ  ಕರ್ನಾಟಕದಲ್ಲಿ   ಯುವನಿಧಿ ಜಾರಿಗೊಳಿಸಲಾಗುತ್ತದೆ ಹಾಗೂ ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು. . ಕರ್ನಾಟಕ ರಾಜ್ಯದ ಜನತೆಗೆ ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ..ಯುವ ನಿಧಿ ಯೋಜನೆಯನ್ನು ಜಾರಿಗೆ ಮಾಡಿದರೆ ನಾವು ಘೋಷಣೆ ಮಾಡಿದಂತೆ
ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೆ ಜಾರಿಗೊಳಿಸಿದಂತಾಗುತ್ತದೆ ಎಂದು ಹೇಳಿದರು . ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

ನಾವು ಅಧಿಕಾರ ಸ್ವೀಕರಿಸಿದ ಮೇ 20ರ ದಿನದಂದೇ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿದ್ದೇವೆ. ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ 2 ವರ್ಷಗಳವರೆಗೆ ಮಾಸಿಕ 3000 ರೂ. ಹಾಗೂ 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುತ್ತೆ, . ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular