ಬೆಂಗಳೂರು : ನಗರದ ಟ್ರಾಫಿಕ್ ಸಿಗ್ನಲ್ ನಲ್ಲಿ 70 ಬ್ಯಾಟರಿ ಕದ್ದಿದ್ದ ಇಬ್ಬರು ಆರೋಪಿಗಳನ್ನು ಹ್ರೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಎಂದು ಗುರುತಿಸಲಾಗಿದ್ದು, 5 ಲಕ್ಷ ಮೌಲ್ಯದ 70 ಬ್ಯಾಟರಿ ಜಪ್ತಿ ಮಾಡಲಾಗಿದೆ.
ಸಂಚಾರ ವಿಭಾಗದ ಪೊಲೀಸರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಹ್ರೈಗ್ರೌಂಡ್ಸ್ ಠಾಣೆ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಟ್ರಾಫಿಕ್ ಸಿಗ್ನಲ್ ನಲ್ಲಿ ಅಳವಡಿಸಿದ್ದ ಬ್ಯಾಟರಿಗಳನ್ನು ಕಳವು ಮಾಡಿ ನಂತರ ಅದನ್ನು ಗುಜರಿಗೆ ಹಾಕಿ ಹಣ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.