ರಾಯಚೂರು : ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನೇ ಪತಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಸುನೀತಾ (28) ಎಂದು ಗುರುತಿಸಲಾಗಿದೆ. ಕುಡಿತದ ಚಟಕ್ಕೆ ದಾಸನಾದ ಪತಿ ಬಸವರಾಜ ಪತ್ನಿಯನ್ನು ಹಣಕ್ಕಾಗಿ ಪೀಡಿಸಿದ್ದಾನೆ. ಹಣ ಕೊಡದೇ ಇದ್ದಕ್ಕೆ ಬಸವರಾಜ ಸಲಿಕೆ ತೆಗೆದುಕೊಂಡು ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.