
ಮೃತನನ್ನು 27 ವರ್ಷದ ಯುವಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಭಾನುವಾರ ತೋಟದಲ್ಲಿ ತೆಂಗಿನ ಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಏಣಿ ಎತ್ತಿಕೊಂಡು ಹೋಗುವಾಗ ವಿದ್ಯುತ್ ತಂತಿಗೆ ಏಣಿ ತಗುಲಿ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

