HomeKarnatakaBIG NEWS: ಸಿಎಂ ಜನತಾ ದರ್ಶನ: ಸಮಸ್ಯೆ ಹೇಳಿಕೊಂಡ ಬೀದಿ ಬದಿ ವ್ಯಾಪಾರಿಗೆ ‘ಸಿದ್ಧರಾಮಯ್ಯ’ ಸ್ಥಳದಲ್ಲೇ ಪರಿಹಾರ

BIG NEWS: ಸಿಎಂ ಜನತಾ ದರ್ಶನ: ಸಮಸ್ಯೆ ಹೇಳಿಕೊಂಡ ಬೀದಿ ಬದಿ ವ್ಯಾಪಾರಿಗೆ ‘ಸಿದ್ಧರಾಮಯ್ಯ’ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಸೂಚಿಸುವ ಕೆಲಸ ಮಾಡುತ್ತಿದ್ದಾರೆ.

ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರು ಜನತಾ ದರ್ಶನದಲ್ಲಿ ದೂರು ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಅವರು ಅವರು ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ‌ ಅವರಿಗೆ ಇನ್ನುಮುಂದೆ ಯಾವುದೇ ತೊಂದರೆಯಾಗದಂತೆ ನಿಶ್ಚಿಂತರಾಗಿ ವ್ಯಾಪಾರ ಮಾಡಿಕೊಂಡು ಹೋಗಲು ಅವಕಾಶ ಮಾಡಿಕೊಡುವಂತೆ ಸೂಚನೆ ನೀಡಿ, ಸ್ಥಳದಲ್ಲೇ ಬಡಮಹಿಳೆಯ ಸಮಸ್ಯೆ ಬಗೆಹರಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular