HomeKarnatakaBIG NEWS: ನನ್ನನ್ನು ಸೋಲಿಸಲು ತೀರ್ಮಾನ ಮಾಡಬೇಕಿರುವುದು ಜನ ಹೊರತು ವಿಜಯೇಂದ್ರ, ಕುಮಾರಸ್ವಾಮಿ ಅಲ್ಲ; ಸಂಸದ...

BIG NEWS: ನನ್ನನ್ನು ಸೋಲಿಸಲು ತೀರ್ಮಾನ ಮಾಡಬೇಕಿರುವುದು ಜನ ಹೊರತು ವಿಜಯೇಂದ್ರ, ಕುಮಾರಸ್ವಾಮಿ ಅಲ್ಲ; ಸಂಸದ ಡಿ.ಕೆ.ಸುರೇಶ್ ಟಾಂಗ್

ಬೆಂಗಳೂರು: ನನ್ನ ಸೋಲಿಸುವ ಬಗ್ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನರು ತೀರ್ಮಾನ ಮಾಡಬೇಕು ಹೊರತು ಬಿ.ವೈ.ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಅಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಟಾಂಗ್ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸುತ್ತೇವೆ. ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಡಿ.ಕೆ.ಸುರೇಶ್, ಅವರಿಗೆ ನನ್ನನ್ನು ಸೋಲಿಸಲು ಅಗುತ್ತಾ? ನನ್ನನ್ನು ಸೋಲಿಸೋಕೆ ಕ್ಷೇತ್ರದ ಜನರು ತೀರ್ಮಾನ ಮಾಡಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಡಿ.ಕೆ.ಸುರೇಶ್, ಹೈಕಮಾಂಡ್ ಎಲ್ಲಿ ನಿಲ್ಲು ಎನ್ನುತ್ತೋ ಅಲ್ಲಿ ನಿಲ್ಲುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular