HomeKarnatakaತುಮಕೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ...

ತುಮಕೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು :  ತುಮಕೂರಿನ ಸದಾಶಿವನಗರದ ನಿವಾಸಿ ಗರೀಬ್ ಸಾಬ್ ಮತ್ತು ಅವರ ಕುಟುಂಬ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ತೆರಳಿ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ ಪಡೆದಿದ್ದಾರೆ.

ಗರೀಬ್ ಸಾಬ್ ವ್ಯಾಪಾರಕ್ಕಾಗಿ ಸಾಲ‌ ಮಾಡಿಕೊಂಡಿದ್ದರು. ವ್ಯಾಪಾರದಲ್ಲಿ ನಷ್ಟ ಅನುಭವಿಸಿದ್ದರು. ಈ ನಡುವೆ ಸಾಲ ಕೊಟ್ಟವರು ಹಣಕ್ಕಾಗಿ ಪೀಡಿಸುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಈವರೆಗಿನ ತನಿಖೆಯಿಂದ ಗೊತ್ತಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿರುವ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಗರೀಬ್ ಸಾಬ್‌ಗೆ ತಂದೆ-ತಾಯಿ ಇದ್ದಾರೆ. ಅವರಿಗೆ ಪರಿಹಾರ ನೀಡಬೇಕು. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು, ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular