HomeKarnatakaBREAKING NEWS: ಭ್ರೂಣ ಹತ್ಯೆ ಬಳಿಕ ಮತ್ತೊಂದು ಭಯಾನಕ ಜಾಲಪತ್ತೆ; ಬೆಂಗಳೂರಿನಲ್ಲಿ ಮಕ್ಕಳ ಮಾರಾಟ ಮಾಡುತ್ತಿದ್ದ...

BREAKING NEWS: ಭ್ರೂಣ ಹತ್ಯೆ ಬಳಿಕ ಮತ್ತೊಂದು ಭಯಾನಕ ಜಾಲಪತ್ತೆ; ಬೆಂಗಳೂರಿನಲ್ಲಿ ಮಕ್ಕಳ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: 900 ಹೆಣ್ಣುಭ್ರೂಣ ಹತ್ಯೆ ಮಾಡಿದ್ದ ಜಾಲ ಬಂಧನ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಗ್ಯಾಂಗ್ ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಹಸುಗೂಸುಗಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಪತ್ತೆಯಾಗಿದ್ದು, ತಮಿಳುನಾಡು ಮೂಲದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡಿನ ಕಣ್ಣನ್ ರಾಮಸ್ವಾಮಿ, ಮುರುಗೇಶ್ವರಿ, ಹೇಮಲತಾ ಹಾಗೂ ಶರಣ್ಯ ಬಂಧಿತ ಆರೋಪಿಗಳು. ರಾಜರಾಜೇಶ್ವರಿ ನಗರದಲ್ಲಿ 20 ದಿನದ ಗಂಡು ಮಗುವನ್ನು ಮಾರಾಟ ಮಾಡುತ್ತಿದ್ದ ವೇಳೆಯೇ ಆರೊಪಿಗಳು ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹಸುಗೂಸನ್ನು ಪೊಲೀಸರು ರಕ್ಷಿಸಿದ್ದಾರೆ.

ಆರೋಪಿಗಳು ಲಕ್ಷ ಲಕ್ಷ ಹಣ ಪಡೆದು ಹಸುಗೂಸುಗಳನ್ನು ಮಕ್ಕಳಾಗದ ದಂಪತಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಜಾಲದ ಹಿಂದೆ ಇನ್ನಷ್ಟು ಜನರು ಇರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular