HomeKarnataka‘ಜನಸ್ಪಂದನ’ದಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿದ ಸಿಎಂ ಸಿದ್ಧರಾಮಯ್ಯ: ಸ್ವೀಕೃತ ಎಲ್ಲಾ 3500 ಅರ್ಜಿಗಳ ಇತ್ಯರ್ಥಕ್ಕೆ ಕ್ರಮ

‘ಜನಸ್ಪಂದನ’ದಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿದ ಸಿಎಂ ಸಿದ್ಧರಾಮಯ್ಯ: ಸ್ವೀಕೃತ ಎಲ್ಲಾ 3500 ಅರ್ಜಿಗಳ ಇತ್ಯರ್ಥಕ್ಕೆ ಕ್ರಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಆಲಿಸಿದರು.

ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ. ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಜನಸ್ಪಂದನೆ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರು. ಸುಮಾರು 3500 ಮನವಿಗಳು ಸ್ವೀಕೃತವಾಗಿದೆ. ನಾನು ಬೆಳಿಗ್ಗೆಯಿಂದಲೇ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಖುದ್ದು ಆಲಿಸಿದ್ದೇನೆ. ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಬಗ್ಗೆ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಇಂದಿನ ಜನಸ್ಪಂದನಕ್ಕೆ ಉದ್ಯೋಗ ಬೇಡಿಕೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದು, ಸಾಧ್ಯವಾದ ಕಡೆಗಳಲ್ಲಿ ಉದ್ಯೋಗ ಹಾಗೂ ಮಾಸಾಶನ ಒದಗಿಸಲು ಸೂಚನೆ ನೀಡಲಾಗಿದೆ. ಜಿಲ್ಲಾ ಮಂತ್ರಿಗಳು, ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಜನರ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಲಾಗಿದೆ. ಮೂರು ತಿಂಗಳ ನಂತರ ಮತ್ತೊಮ್ಮೆ ಜನಸ್ಪಂದನ ನಡೆಸಲಾಗುವುದು. ಆಗ ಈ ಪ್ರಮಾಣದಲ್ಲಿ ಜನರು ತಮ್ಮ ಸಮಸ್ಯೆಗಳೊಂದಿಗೆ ಬರದಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ನೋಡಿಕೊಳ್ಳಬೇಕು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ ಎಂದರು.

ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ ಸಮಸ್ಯೆ ಸೇರಿದಂತೆ ಆರೋಗ್ಯ ಸಮಸ್ಯೆಯಿಂದಾಗಿ ವೈದ್ಯಕೀಯ ವೆಚ್ಚ ಭರಿಸುವ ಮನವಿಗಳು ಹೆಚ್ಚು ಸ್ವೀಕೃತವಾಗಿವೆ. ನಾನು ಮುಖ್ಯಮಂತ್ರಿಯಾದ ನಂತರ ಜನರ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತದೆ ಎಂಬ ನಂಬಿಕೆಯಿಂದ ಜನರು ಸರ್ಕಾರಿ ಆಸ್ಪತ್ರೆ ಬಿಟ್ಟು, ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುವ ಕಾರಣ, ಅವರ ವೈದ್ಯಕೀಯ ವೆಚ್ಚಗಳೂ ಹೆಚ್ಚಾಗುತ್ತವೆ. ಆ ವೆಚ್ಚದಲ್ಲಿ ಸಣ್ಣಪ್ರಮಾಣವನ್ನು ಸರ್ಕಾರ ಈ ರೀತಿ ಭರಿಸಲು ಪ್ರಯತ್ನಿಸುತ್ತದೆ ಎಂದರು.

ಮಕ್ಕಳ ಪೌಷ್ಟಿಕಾಂಶ ಸಮಸ್ಯೆಗಳ ಬಗ್ಗೆ ಇಂದು ಅಹವಾಲುಗಳ ಬಂದಿವೆ, ಮಕ್ಕಳ ಪೌಷ್ಠಿಕಾಂಶ ವೃದ್ಧಿಸುವ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ 185 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಅನೀಮಿಯಾ ಇರುವ ಮಕ್ಕಳಿಗೆ ಔಷಧಿ, ಶಾಲಾಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಪ್ರತಿದಿನವು ಹಾಲು, ಬಿಸಿಯೂಟ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಶಕ್ತಿ ಯೋಜನೆ ಅಭೂತಪೂರ್ವ ಯಶಸ್ವಿಯಾದರೂ, ಕೆಲವೆಡೆ ಬಸ್ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ 971 ಬಸ್ ಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಅಗತ್ಯವಿರುವೆಡೆ ಹೆಚ್ಚು ಬಸ್ ಗಳನ್ನು ಹಾಕಲು ತಿಳಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular