ಮೈಸೂರು : ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೊನೆಗೂ ಸೆರೆ ಹಿಡಿದಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಅರವಳಿಕೆ ಚುಚ್ಚು ಮದ್ದು ನೀಡಿ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.
ನಂಜನಗೂಡು ತಾಲ್ಲೂಕಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ದನ ಮೇಯಿಸುತ್ತಿದ್ದ ರತ್ನಮ್ಮ (49) ಅವರ ಮೇಲೆ ಹುಲಿ ದಾಳಿ ನಡೆಸಿ ಕೊಂದಿದೆ. ಹುಲಿಯು ಮೃತ ದೇಹವನ್ನು 3 ಕಿ. ಮೀ ದೂರ ಎಳೆದೊಯ್ದು ಅರೆಬರೆ ತಿಂದು ಹೋಗಿತ್ತು.