HomeKarnatakaBREAKING : ಕೋಲಾರ ಮೊರಾರ್ಜಿ ಶಾಲೆ ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಟ್ವಿಸ್ಟ್ : ಕುಡಿಯುವ ನೀರಿಗೆ...

BREAKING : ಕೋಲಾರ ಮೊರಾರ್ಜಿ ಶಾಲೆ ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಟ್ವಿಸ್ಟ್ : ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದ ವಿದ್ಯಾರ್ಥಿ!

ಕೋಲಾರ : ಕೋಲಾರದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ವಿದ್ಯಾರ್ಥಿಯೊಬ್ಬ ಮನೆಗೆ ಹೋಗಲು ಕುಡಿಯುವ ನೀರಿನಲ್ಲಿ ವಿಷ ಬೆರೆಸಿದ್ದ ಎನ್ನುವ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.

ಕೋಲಾರದ ದೊಡ್ಡಪೊನ್ನಾಂಡಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ನಿನ್ನೆ ಕುಡಿಯುವ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ ಸ್ಪೋಟಕ ಮಾಹಿತಿ ಸಿಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಯೇ ಕುಡಿಯುವ ನೀರಿಗೆ ವಿಷ ಬೆರೆಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದ್ದು, ತಂದೆ-ತಾಯಿಯನ್ನು ನೋಡಲು ಮನೆಗೆ ಹೋಗಲು ರಜೆ ಸಿಗುತ್ತೆ ಅನ್ನೋ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದ, ವಿದ್ಯಾರ್ಥಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular