ಬೆಂಗಳೂರಲ್ಲಿ ಹಸುಗೂಸು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಸುದ್ದಿಗೋಷ್ಟಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ 20 ದಿನದ ಹಸುಗೂಸು ಮಾರಾಟ ಮಾಡಲಾಗುತ್ತಿತ್ತು, ಕೂಡಲೇ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾರಾಟ ಮಾಡುತ್ತಿದ್ದಂತ ಗಂಡು ಮಗುವನ್ನು ರಕ್ಷಿಸಿದ್ದಾರೆ ಎಂದರು.
ಹಸುಗೂಸು ಮಾರಾಟ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ತಮಿಳುನಾಡು ಮೂಲದವರಾಗಿದ್ದು, ಬಡ ಮಹಿಳೆಯರಿಗೆ ಗರ್ಭಧಾರಣೆ ಮಾಡಿಸಿ ಮಗು ಪಡೆಯುತ್ತಿದ್ದರು. ಆ ಮಗುವನ್ನು 8 ರಿಂದ 10 ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ಈ ಜಾಲ ಒಂದು ಮಗುವಿನ ಮಾರಾಟಕ್ಕೆ ಪಡೆಯುವ ಮೊತ್ತ 8ರಿಂದ 15 ಲಕ್ಷ ರೂ ಆಗಿದ್ದು, ಬಂಧನಕ್ಕೆ ಒಳಗಾಗಿರುವ ತಂಡ ಇದುವರೆಗೆ ಸುಮಾರು 60 ಶಿಶುಗಳ ಮಾರಾಟ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದೆ.