HomeKarnatakaBIG NEWS : ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲು : ನಾಳೆ ಆರೋಗ್ಯಾಧಿಕಾರಿಗಳ...

BIG NEWS : ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲು : ನಾಳೆ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ

ಬೆಂಗಳೂರು : ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆಯ ಕರಾಳ ದಂಧೆ ಬಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಆರೋಗ್ಯಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.

ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಮುಂದೆ ತೆಗೆದುಕೊಳ್ಳಬಹುದಾದ ಕಠಿಣ ನಿಯಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಸದ್ಯ, ಮಂಡ್ಯದ ಆಲೆಮನೆಗೆ ಲೋಕಾಯುಕ್ತ ಡಿವೈಎಸ್ ಪಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಪತ್ತೆಹಚ್ಚಿದ ಆಲೆಮನೆಯಲ್ಲಿ ಲಿಂಗ ಪತ್ತೆ ಮಾತ್ರವಲ್ಲ, ಅಲ್ಲಿ ಹೆಣ್ಣು ಭ್ರೂಣ ಹತ್ಯೆ ಕೂಡ ಮಾಡಲಾಗುತ್ತಿತ್ತು ಅಲೆಮನೆ ಪಕ್ಕದಲ್ಲಿ ಭ್ರೂಣ ಪತ್ತೆ ಜೊತೆ ಹೆಣ್ಣು ಭ್ರೂಣ ಹತ್ಯೆ ಕೂಡ ನಡೆಯುತ್ತಿದ್ದು, ಕಳೆದ 2 ವರ್ಷಗಳಿಂದ ಭ್ರೂಣ ಲಿಂಗ ಪತ್ತೆ ದಂಧೆ ಎಗ್ಗಿಲ್ಲದೇ ನಡೆಯತ್ತಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular