alex Certify ರಾಜ್ಯದ ʻಹಿಂದುಳಿದ ವರ್ಗಗಳ ವಿದ್ಯಾರ್ಥಿʼಗಳೇ ಗಮನಿಸಿ : ʻವಿದ್ಯಾಸಿರಿʼ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ʻಹಿಂದುಳಿದ ವರ್ಗಗಳ ವಿದ್ಯಾರ್ಥಿʼಗಳೇ ಗಮನಿಸಿ : ʻವಿದ್ಯಾಸಿರಿʼ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾಸಿರಿ, ವಿದ್ಯಾರ್ಥಿ ವೇತನ, ಶುಲ್ಕಮರುಪಾವತಿ ಯೋಜನೆ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 10.01.2024 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.01.2024

ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ : https://ssp.postmatric.karnataka.gov.in

ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಮಾಹಿತಿಗಾಗಿ ಭೇ ಟಿ ನೀಡಬೇಕಾದ ವೆಬ್ ಸೈಟ್

https://bcwd.karnataka.gov.in

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005

ಇ-ಮೇಲ್‌ bcwdhelpline@gmail.com

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in

ದೂರವಾಣಿ ಸಂಖ್ಯೆ: 1902

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...