HomeKarnatakaರಾಜ್ಯದ `SC-ST' ವರ್ಗದವರ ಗಮನಕ್ಕೆ : `ಸ್ವಾವಲಂಬಿ ಯೋಜನೆ'ಯಡಿ `ಸರಕು ವಾಹನಟ್ಯಾಕ್ಸಿ 'ಖರೀದಿಗೆ ಅರ್ಜಿ ಸಲ್ಲಿಸಲು...

ರಾಜ್ಯದ `SC-ST’ ವರ್ಗದವರ ಗಮನಕ್ಕೆ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿ ‘ಖರೀದಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು :ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು  ಅರ್ಜಿ ಸಲ್ಲಿಕೆಗೆ ನವೆಂಬರ್ 29ರ ಇಂದು ಕೊನೆಯ ದಿನವಾಗಿದೆ. ಹೀಗಾಗಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ವಾವಲಂಬಿ ಸಾರಥಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ನಿಗಮದ ಸಹಾಯಧನ ಹಾಗೂ ಬ್ಯಾಂಕ್ ಸಾಲ ಸಹಯೋಗದೊಂದಿಗೆ ಉದ್ಯೋಗ ಅವಕಾಶ ಒದಗಿಸಲಾಗುತ್ತದೆ. ಯೋಜನೆಯಡಿ ಘಟಕವೆಚ್ಚ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.1 ಲಕ್ಷ, ಘಟಕವೆಚ್ಚ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.2 ಲಕ್ಷ. ಸ್ವಾವಲಂಬಿ ಸಾರಥಿ ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕವೆಚ್ಚದ ಶೇ. 75 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.4 ಲಕ್ಷ ಒದಗಿಸಲಾಗುವುದು.

For Latest News Updates, Join Our Whatsapp Community🚩
RELATED ARTICLES

Most Popular