HomeKarnatakaಶಾಕಿಂಗ್ ನ್ಯೂಸ್ : ಯಾದಗಿರಿ ವಸತಿ ಶಾಲೆಯ 350 ವಿದ್ಯಾರ್ಥಿಗಳಿಗೆ ವಿಚಿತ್ರ ಚರ್ಮರೋಗ!

ಶಾಕಿಂಗ್ ನ್ಯೂಸ್ : ಯಾದಗಿರಿ ವಸತಿ ಶಾಲೆಯ 350 ವಿದ್ಯಾರ್ಥಿಗಳಿಗೆ ವಿಚಿತ್ರ ಚರ್ಮರೋಗ!

ಯಾದಗಿರಿ : ಯಾದಗಿರಿ ಜಿಲ್ಲೆಯ ಗುಮಠಕಲ್‌ ತಾಲೂಕಿನ ಸೈದಾಪುರ ಸಮೀಪದ ಬಾಲಛೇಡದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಮಾದರಿ ವಸತಿ ಶಾಲೆಯ ೩೫೦ ಕ್ಕೂ ಹೆಚ್ಚು ಮಕ್ಕಳು ವಿಚಿತ್ರ ಚರ್ಮರೋಗ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಕಲುಷಿತ ಕುಡಿಯುವ ನೀರು ಹಾಗೂ ನೈರ್ಮಲ್ಯದ ಕೊರತೆಯಿಂದ ಚರ್ಮ ರೋಗಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ವಿದ್ಯಾರ್ಥಿಗಳ ದೇಹದಾದ್ಯಂತ ತುರಿಕೆ, ಗುಳ್ಳೆಗಳು, ಸುಕ್ಕುಗಟ್ಟಿದಂಥ ಸಮಸ್ಯೆಗೆ ನರಳುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿತ್ಯ ಇದೇ ಕಾರಣಕ್ಕೆ 15 ರಿಂದ 20 ಮಕ್ಕಳು ಶಾಲೆಗೆ ಗೈರಾಗುತ್ತಿದ್ದಾರೆ. ಇದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಅವರು ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದ ವೇಳೆ ವಿದ್ಯಾರ್ಥಿಗಳಲ್ಲಿ ಕಾಡುತ್ತಿರುವ ಚರ್ಮದ ಸಮಸ್ಯೆ ಬೆಳಕಿಗೆ ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular