BIG NEWS: ಆಡಳಿತ ಪಕ್ಷದ ಶಾಸಕರ ಪರಿಸ್ಥಿತಿ ಹೀಗಾದರೆ ಜನರ ಸ್ಥಿತಿ ಏನು? ಸರ್ಕಾರಕ್ಕೆ ಕಂಟಕವಾಗುತ್ತಾ? ಕಾದುನೋಡಿ ಎಂದ ಕುಮಾರಸ್ವಾಮಿ

ಮೈಸೂರು: ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಇದರಿಂದ ಅಪಘಾತ ಅಥವಾ ಹಿಟ್ ವಿಕೆಟ್ ಆಗಬಹುದು ಕಾದುನೋಡಿ ಎಂದಿದ್ದಾರೆ.

ಮೈಸೂರಿನಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಇದು ಕೇವಲ ಬಿ.ಆರ್.ಪಾಟೀಲ್ ಒಬ್ಬರ ಸಮಸ್ಯೆ ಅಲ್ಲ, ಇಡೀ ವ್ಯವಸ್ಥೆಯ ಸಮಸ್ಯೆ. ಇದರಿಂದ ಸರ್ಕಾರಕ್ಕೆ ಕಂಟಕವಾಗುತ್ತಾ ಎಂಬುದನ್ನು ಕಾದುನೋಡಿ ಎಂದರು.

ಶಾಸಕರ ಪತ್ರದಿಂದ ಏನಾಗಬಹುದು ಎಂದು ಹೇಳಲು ನಾನು ಜ್ಯೋತಿಷಿ ಅಲ್ಲ. ಸಚಿವರಿಂದ ಮನನೊಂದು ಶಾಸಕರು ಪತ್ರ ಬರೆದಿದ್ದಾರೆ. ಆಡಳಿತ ಪಕ್ಷದ ಶಾಸಕರ ಪರಿಸ್ಥಿತಿಯೇ ಹೀಗಾದರೆ ಇನ್ನು ಜನರ ಸ್ಥಿತಿ ಏನು? ಎಂದು ಪ್ರಶ್ನಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರದ ಬಗ್ಗೆ ಜನರಿಗೂ ಅನುಮಾನ ಮೂಡಿದೆ. ಸಿಎಂಗೆ ಪತ್ರ ಬರೆದು ಬಿ.ಆರ್.ಪಾಟೀಲ್ ತನಿಖೆಗೆ ಒತ್ತಾಯಿಸಿದ್ದಾರೆ. ಆದರೆ ಸದನಕ್ಕೆ ಬರಲ್ಲ ಎಂದು ಹೇಳಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರಿಗೆ ಎಷ್ಟು ಬೆಲೆ ಇದೆ ಎಂಬುದು ಗೊತ್ತಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read