ಬೆಂಗಳೂರು : ರಾಜ್ಯದ ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಿದೆ.
ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ (ಪ್ರೈಜ್ ಮನಿ) ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31, 2023 ಕೊನೆಯ ದಿನಾಂಕವಾಗಿದೆ. ಕೆಳಗಿನ ಲಿಂಕ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಲಿಂಕ್
https://swdservices.karnataka.gov.in/swprizemoney/Home.aspx?ReturnUrl=%2fswprizemoney%2f
ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.