HomeKarnatakaಬೆಳೆಹಾನಿಗೆ ಪರಿಹಾರ ನೀಡುವ ಕುರಿತು ‘ಸಿಎಂ ಸಿದ್ದರಾಮಯ್ಯ’ ಮಹತ್ವದ ಹೇಳಿಕೆ

ಬೆಳೆಹಾನಿಗೆ ಪರಿಹಾರ ನೀಡುವ ಕುರಿತು ‘ಸಿಎಂ ಸಿದ್ದರಾಮಯ್ಯ’ ಮಹತ್ವದ ಹೇಳಿಕೆ

ಹಾವೇರಿ : ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು.

ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಜಿಲ್ಲಾಮಂತ್ರಿಗಳು, ಜಿಲ್ಲಾಧಿಕಾರಿಗಳಿಗೆ ಬರಗಾಲದ ಪರಿಸ್ಥಿತಿಯ ಬಗ್ಗೆ ನಿಗಾ ವಹಿಸುವುದಲ್ಲದೇ, ಕುಡಿಯುವ ನೀರಿಗೆ ಕೊರತೆ ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

ಎನ್.ಆರ್.ಜಿ.ಎಸ್ ಅಡಿ ಬರಗಾಲದ ಪರಿಸ್ಥಿತಿಯಲ್ಲಿ 150 ಮಾನವದಿನಗಳ ಉದ್ಯೋಗ ನೀಡುವಂತೆ ನಿಯಮವಿದೆ. ಈ ಕ್ರಮಕ್ಕೆ ಕೇಂದ್ರ ಸರ್ಕಾರದವರು ಅನುಮತಿ ನೀಡಬೇಕಿದ್ದು, ಇದುವೆರಗೆ ಈ ಅನುಮತಿಯನ್ನು ನೀಡಿಲ್ಲ.
ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ.

ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಗೆ ಸಮ್ಮತಿಸುತ್ತಿದ್ದೆ ಎಂದು ಸಿಎಂ ಹೇಳಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular