ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 995 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ರಕ್ಷಣಾ ಇಲಾಖೆಯ ಗ್ರೇಡ್ 2 ಹುದ್ದೆಗಳು ಇವಾಗಿವೆ. ಕೇಂದ್ರ ಗುಪ್ತಚರ ಇಲಾಖೆಯ 995 ಅಸಿಸ್ಟೆಂಟ್ ಸೆಂಟ್ರಲ್ ಇಂಟಲಿಜೆನ್ಸಿ ಆಫೀಸರ್ ಗ್ರೇಡ್ 2 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿವಿ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.
ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ ವಯೋಮಿತಿ ಹೊಂದಿದವರು ಅರ್ಜಿ ಸಲ್ಲಿಸಬಹುದು. ಒಬಿಸಿ, ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಈ ಹುದ್ದೆಗೆ 44 900- 1,42,400 ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ. ರಾಜ್ಯದ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲ್ಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ನವೆಂಬರ್ 25 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 15 ಅರ್ಜಿ ಸಲ್ಲಿಸಲು, ಡಿಸೆಂಬರ್ 19 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ. ಮಾಹಿತಿಗಾಗಿ mha.gov.in ಅಥವಾ nsc.gov.in ವೆಬ್ಸೈಟ್ ಗಮನಿಸಬಹುದಾಗಿದೆ.