HomeKarnatakaBIGG NEWS : ರಾಜ್ಯದಲ್ಲಿ ಬರ ಹಿನ್ನೆಲೆ : ಈ ವರ್ಷ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇಲ್ಲ

BIGG NEWS : ರಾಜ್ಯದಲ್ಲಿ ಬರ ಹಿನ್ನೆಲೆ : ಈ ವರ್ಷ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇಲ್ಲ

ಮಂಡ್ಯ : ರಾಜ್ಯದಲ್ಲಿ ಬರದ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಈ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆ ಇಲ್ಲ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮಹೇಶ್‌ ಜೋಶಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಹಾವೇರಿ ಜಿಲ್ಲೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಯಶಸ್ಸು ಕಂಡಿದ್ದು, ಅದೇ ಮಾದರಿಯಲ್ಲೇ ಮಂಡ್ಯದಲ್ಲಿಯೂ ಈ ಬಾರಿ ವಿನೂತನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಪೂರ್ವಭಾವಿ ಸಿದ್ಧತೆ ನಡೆಸಲಾಗಿತ್ತು. ಆದರೆ ಬರಗಾರದ ಹಿನ್ನೆಲೆಯಲ್ಲಿ ಈ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆ ಇಲ್ಲ. ಮುಂದಿನ ವರ್ಷ ಅದ್ಧೂರಿಯಾಗಿ ಸಮ್ಮೇಳನ ನಡೆಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರಗಾಲದಿಂದ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಆದ್ದರಿಂದ ನಾಡಜನರ ಸಂಕಷ್ಟಕ್ಕೆ ನಾವೆಲ್ಲರೂ ಸ್ಪಂದಿಸಬೇಕಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular