ಬಳ್ಳಾರಿ : ಜಿಲ್ಲೆಯಲ್ಲಿ ಡಿ.01ರಿಂದ 06ರವರೆಗೆ ಅಖಿಲ ಭಾರತ ವೃತ್ತಿ ಪರೀಕ್ಷೆ (ಪೂರಕ) ಡಿಸೆಂಬರ್-2023 ರ ವೃತ್ತಿ ಪ್ರಾಯೋಗಿಕ ಮತ್ತು ತಾಂತ್ರಿಕ ರೇಖಾ ಚಿತ್ರ ವಿಷಯಗಳ, ಅನುತ್ತೀರ್ಣ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷೆ ಹಾಗೂ Left Over ತರಬೇತುದಾರರಿಗೆ (CTS & DTS System) ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಡಿ.01ರಿಂದ 06ರವರೆಗೆ ಬೆಳ್ಳಿಗ್ಗೆ 09ಗಂಟೆಯಿಂದ ಮಧ್ಯಾಹ್ನ 02.30 ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳನ್ನು ಕಾರ್ಯನಿರ್ವಹಿಸದಂತೆ ಅವರು ಆದೇಶಿಸಿದ್ದಾರೆ.
ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದ್ದು, ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.