ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬ್ರ್ಯಾಂಡೆಡ್ ಬಟ್ಟೆಗಳ ನಕಲಿ ಮಾಡುತ್ತಿದ್ದ ಅಂಗಡಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬೊಮ್ಮನಹಳ್ಳಿ, ಕೆ.ಆರ್.ಮಾರ್ಕೆಟ್ ಬಳಿ ಗಾರ್ಮೆಂಟ್ಸ್ ಮಾದರಿಯಲ್ಲಿ ಹಲವರನ್ನು ಕೆಲಸಕ್ಕೆ ಇಟ್ಟುಕೊಂಡು ನಕಲಿ ಬ್ರ್ಯಾಂಡೆಡ್ ಬಟ್ಟೆ ತಯಾರಿಸುತ್ತಿದ್ದರು. ಬೊಮ್ಮನಹಳ್ಳಿಯಲ್ಲಿ ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್ ಪಿ ಸೇರಿದಂತೆ ಹಲವು ಬ್ರ್ಯಾಂಡೆಡ್ ಕಂಪನಿಗಳ ಹೆಸರಲ್ಲಿ ನಕಲಿ ಬಟ್ಟೆ ತಯಾರಿ ಮಾಡಲಾಗುತ್ತಿತ್ತು. ಇದನ್ನು ಅಸಲಿ ಕಂಪನಿ ಬಟ್ಟೆಗಳು ಎಂದು ಬಿಂಬಿಸಿ ಮಾರಾಟ ಮಾಡಲಾಗುತ್ತಿತ್ತು.
ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಬೊಮ್ಮನಹಳ್ಳಿ, ಕೆ.ಆರ್.ಮಾರ್ಕೆಟ್ ನಲ್ಲಿ ದಾಳಿ ನಡೆಸಿದ್ದು, ಪಟೇಲ್ ಎಕ್ಸ್ ಪೋರ್ಟ್ ಅಂಗಡಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಬ್ರ್ಯಾಂಡೆಡ್ ಬಟ್ಟೆ ನಕಲು ಮಾಡುತ್ತಿದ್ದ ಭರತ್, ರಾಧ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.