ಬೆಳಗಾವಿ : ಬೆಳಗಾವಿ ರೈತರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದು, ಪ್ರತಿಭಟನೆಗೆ ಬಳಸುವ ಜಮೀನಿನ ಬಾಡಿಗೆ ದರ ಹೆಚ್ಚಳ ಮಾಡಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದ ಅಧಿವೇಶನ ನಡೆಯುವ ವೇಳೆ ಪಕ್ಕದ ಜಮೀನುಗಳನ್ನು ಬಾಡಿಗೆ ಪಡೆದು ಟೆಂಟ್ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ. ಅಧಿವೇಶನ ನಡೆಯುವ ಪ್ರತಿ ವರ್ಷ ಕೂಡ ಪ್ರತಿಭಟನೆ ನಡೆಸಲು ಜಮೀನನನ್ನು ಬಾಡಿಗೆ ಪಡೆಯಲಾಗುತ್ತದೆ. ಇಲ್ಲಿ ಬಂದು ಪ್ರತಿಭಟನೆ ಮಾಡುವವರಿಗೆ ಇಷ್ಟು ಹಣ ಎಂದು ನಿಗದಿ ಮಾಡಲಾಗುತ್ತದೆ. ಆ ಹಣವನ್ನು ಜಮೀನು ಮಾಲೀಕರಿಗೆ ಕೊಡಲಾಗುತ್ತಿತ್ತು, ಇದೀಗ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚಿಸಿದ್ದಾರೆ. ನಮಗೆ ಸಿಗುವ ಬಾಡಿಗೆ ಯಾವುದಕ್ಕೂ ಸಾಕಾಗುವುದಿಲ್ಲ, ಬಾಡಿಗೆ ದರ ಹೆಚ್ಚಳ ಮಾಡಿ ಎಂದು ರೈತರು ಪ್ರತಿಭಟನೆ ನಡೆಸಿದ್ದರು.
ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮಾಣಕ್ಕೆ ಬಳಸಲಾಗಿದ್ದ ರೈತರ ಜಮೀನಿಗೆ ಪ್ರತಿ ಗುಂಟೆಗೆ ರೂ. 1200 ನೀಡಲಾಗಿತ್ತು. ನಮಗೆ ಸಿಗುವ ಬಾಡಿಗೆ ಯಾವುದಕ್ಕೂ ಸಾಕಾಗುವುದಿಲ್ಲ, ಬಾಡಿಗೆ ದರ ಹೆಚ್ಚಳ ಮಾಡಿ ಎಂದು ರೈತರು ಆಗ್ರಹಿಸಿದ್ದರು.ನಂತರ ಪ್ರತಿ ಗುಂಟೆಗೆ ರೂ. 3,000 ನೀಡುವಂತೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ನೀಡಿದ್ದರು. ಸಚಿವರ ಸೂಚನೆಯಂತೆ ರೈತರಿಗೆ ಪ್ರತಿ ಗುಂಟೆಗೆ ರೂ. 3000 ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಬೆಳಗಾವಿ ರೈತರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.