
ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ಎಫ್ ಐ ಆರ್ ನಲ್ಲಿ ಬಡ್ಡಿ ದಂಧೆ ಹಾಗೂ ಕಿರುಕುಳ ಆರೋಪ ದಾಖಲಿಸಲಾಗಿದೆ. ತಮ್ಮ ಸಾವಿಗೆ ಪಕ್ಕದ ಮನೆಯವರು ಬಡ್ಡಿ ದಂಧೆಕೋರರ ಜೊತೆ ಸೇರಿ ನೀಡಿದ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತರು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದರು.
ಪ್ರಕರಣ ಸಂಬಂಧ ಆರೋಪಿಗಳಾದ ಖಲಂದರ್(45) ಪತ್ನಿ ಜರೀನಾ(38) ಅವರನ್ನು ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದಾರೆ, ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.
ಗರೀಬ್ ಸಾಬ್, ಸುಮಯ್ಯ, ಹಜೀನಾ, ಮೊಹ್ಮದ್ ಶಬೀರ್, ಮೊಹಮದ್ ಮುನೀರ್ ಆತ್ಮಹತ್ಯೆ ಮಾಡಿಕೊಂಡವರು. ಇವರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಗಂಡ-ಹೆಂಡತಿ ಹಾಗೂ ಅವರ ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

