ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇವಣಿ ಗ್ರಾಮದ ಸಮೀಪ ನಡೆದಿದೆ.
ಪ್ರಶಾಂತ್, ವಿಠ್ಠಲ್, ಮಂಗ್ಲಿ ಮೃತಪಟ್ಟವರು ಎಂದು ಹೇಳಲಾಗಿದೆ. ಕಲಬುರಗಿಯಿಂದ ಸೇಡಂ ಮಾರ್ಗವಾಗಿ ತೆರಳುತ್ತಿದ್ದ ವಾಹನ ಇವಣಿ ಗ್ರಾಮದ ಬಳಿ ಕೆಟ್ಟು ನಿಂತಿದೆ. ರಸ್ತೆ ಬದಿ ವಾಹನ ನಿಲ್ಲಿಸಿ ದುರಸ್ತಿ ಮಾಡುವಾಗ ಹಿಂದಿನಿಂದ ಬಂದ ಸಿಮೆಂಟ್ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿದ್ದಾರೆ. ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.