HomeKarnatakaಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ : PSI ಸೇರಿ 6 ಸಿಬ್ಬಂದಿಗಳು...

ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ : PSI ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು : ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ PSI ಸೇರಿ 6 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಹೆಲ್ಮೆಟ್ ವಿಚಾರವಾಗಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದಿದ್ದು, ಪೊಲೀಸ್ ಠಾಣೆಯ ಪಿಎಸ್ ಐ ಮಹೇಶ್ ಪೂಜಾರಿ ಸೇರಿ ಆರು ಮಂದಿಯನ್ನು ಅಮಾನತು ಮಾಡಿ ಎಸ್ ಪಿ ವಿಕ್ರಂ ಆಮ್ಟೆ ಆದೇಶ ಹೊರಡಿಸಿದ್ದಾರೆ.

ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸುತ್ತಿದ್ದ ಲಾಯರ್ ಮೇಲೆ ಪೋಲಿಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದರು. ವಕೀಲರು ರಾತ್ರೋರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದು, 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಲಾಗಿತ್ತು, ಈ ಹಿನ್ನೆಲೆ ವಕೀಲರು ಠಾಣೆ ಮುಂದೆ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ಹೊರ ಹಾಕಿದ್ದರು. ಹಲ್ಲೆ ಪ್ರಕರಣ ಸಂಬಂಧ ಆರು ಮಂದಿ ವಿರುದ್ಧ ಐಪಿಸಿ ಸೆಕ್ಷನ್ 307, 324, 506, 504ರ ಅಡಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular