ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್, ಆಲಿಯಾ ಭಟ್ ಸೇರಿದಂತೆ ಹಲವು ನಟಿಯರ ಡೀಫ್ ಫೇಕ್ ವಿಡಿಯೋ ವೈರಲ್ ಆಗಿದ್ದು, ಭಾರಿ ಖಂಡನೆ ವ್ಯಕ್ತವಾಗಿತ್ತು.
ಇದೀಗ ಕಾಂಗ್ರೆಸ್ ನಿಂದ ಡೀಪ್ ಫೇಕ್ ತಂತ್ರಜ್ಞಾನ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ದೂರು ದಾಖಲಾಗಿದೆ.
ಬಿಆರ್ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಸೇರಿ ಸೇರಿ ಹಲವು ನಾಯಕರ ವಿಡಿಯೊ ಹಾಗೂ ಆಡಿಯೊಗಳನ್ನು ವೈರಲ್ ಮಾಡಲು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯು ಡೀಪ್ಫೇಕ್ ತಂತ್ರಜ್ಞಾನವನ್ನು ಬಳಸಿದೆ ಎಂಬ ಆರೋಪ ಕೇಳಿಬಂದಿದೆ. ಜನರನ್ನು ಮೂರ್ಖರನ್ನಾಗಿಸಲು ಕಾಂಗ್ರೆಸ್ ಪ್ರಯತ್ನಿಸಿದೆ” ಎಂದು ಬಿಆರ್ಎಸ್ ದೂರು ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಡೀಪ್ ಫೇಕ್ ಗಳನ್ನು ನಿಭಾಯಿಸಲು ಕಾನೂನನ್ನು ತರಲು ನಿರ್ಧರಿಸಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಇತ್ತೀಚೆಗೆ ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಡೀಪ್ ಫೇಕ್ ವೀಡಿಯೊ ವೈರಲ್ ಆದ ನಂತರ ಈ ವಿಷಯದ ಬಗ್ಗೆ ತುರ್ತು ಚರ್ಚೆಗಳು ನಡೆದಿವೆ.