BIG NEWS: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ; ಚಿರತೆ ಸ್ಥಳದಲ್ಲೇ ಸಾವು

ಮಂಡ್ಯ: ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆ ದಾಳಿಯಿಂದಾಗಿ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮನವಿ ಮಾಡುತ್ತಿದ್ದಾರೆ. ಈ ನಡುವೆ ಮಂಡ್ಯದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದಲ್ಲಿ ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನವೊಂದು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಚಿರತೆ ರಸ್ತೆ ಬದಿ ಹಾರಿ ಬಿದ್ದಿದೆ. ಸ್ಥಳದಲ್ಲೇ ಸಾವನ್ನಪ್ಪಿದೆ.

ಸುಮಾರು ಮೂರು ವರ್ಷದ ಗಂಡು ಚಿರತೆ ಇದಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read