HomeKarnatakaBIG NEWS: ಶಾಲೆಗಳಿಗೆ ಬಾಂಬ್ ಬೆದರಿಕೆ ಹಿಂದೆ ಉಗ್ರರ ಕೈವಾಡ ಶಂಕೆ; ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ...

BIG NEWS: ಶಾಲೆಗಳಿಗೆ ಬಾಂಬ್ ಬೆದರಿಕೆ ಹಿಂದೆ ಉಗ್ರರ ಕೈವಾಡ ಶಂಕೆ; ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು; ಆರ್.ಅಶೋಕ್ ಆಗ್ರಹ

ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಈ ಕೃತ್ಯದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರನಗರದ ನ್ಯಾಫಲ್ ಶಾಲೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರವಾದದ ಅರ್ಥದಲ್ಲಿ ಇ-ಮೇಲ್ ಬೆದರಿಕೆ ಹಾಕಿದ್ದಾರೆ. ಅಲ್ಲಾಗೆ ಮೋಸ ಮಾಡುತ್ತಿದ್ದಾರೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಧರ್ಮಾದಾರಿತ ಬಾಂಬ್ ಬೆದರಿಕೆ ಕರೆ ಹಾಕಿದ್ದಾರೆ. ಈ ಬಾಂಬ್ ಬೆದರಿಕೆ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಪೊಲೀಸ್ ಆಯುಕ್ತರ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular