ಬೆಂಗಳೂರು : ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
2023-24 ನೇ ಸಾಲಿನಲ್ಲಿ ಖಾಸಗಿ ಅನುದಾನಿತ ಅನುದಾನರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿ ಮಹತ್ವದ ಸುತ್ತೋಲೆ ಹೊರಡಿಸಿದೆ.
2023-24ನೇ ಸಾಲಿಗೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಜುಲೈ-2023 ರಿಂದ ಅವಕಾಶ ಕಲ್ಪಿಸಿದ್ದು, ಮೂರನೇ ಬಾರಿಗೆ ಅವಧಿ ವಿಸ್ತರಿಸಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆಡಳಿತ ಮಂಡಳಿಗೆ ದಿನಾಂಕ:29-11-2023 ರವರೆಗೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಹಲವಾರು ಶಾಲೆಗಳು ನೀಡಿರುವ ಕಾಲಾವಕಾಶದಲ್ಲಿ ಅರ್ಜಿ ಸಲ್ಲಿಸದೇ ಪುನ: ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕೋರಿ ಈ ಕಚೇರಿಗೆ ಮನವಿ ಸಲ್ಲಿಸುತ್ತಿರುವುದನ್ನು ಗಮನಿಸಲಾಗಿದೆ.
ಪ್ರಯುಕ್ತ 2023-24ನೇ ಸಾಲಿನಲ್ಲಿ ಮಾನ್ಯತೆ ನವೀಕರಣಕ್ಕೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಸಮಯಾವಕಾಶ ನೀಡುವಂತೆ ಕಚೇರಿಯಲ್ಲಿ ಸ್ವೀಕೃತಿಯಾಗಿರುವ ಮನವಿಗಳಂತೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪರೀಕ್ಷಾ ಹಿತದೃಷ್ಟಿಯಿಂದ ಹಾಗೂ ಆರ್.ಟಿ.ಇ ಶುಲ್ಕ ಮರುಪಾವತಿ ಸಂಬಂಧ ಪರಿಶೀಲಿಸಿದ್ದು, ವಿಶೇಷ ಪ್ರಕರಣದಡಿ ಮತ್ತು ಅಂತಿಮ ಎಚ್ಚರಿಕೆ ನೀಡುತ್ತಾ, 2021-22 ಹಾಗೂ 2022-23ನೇ ಸಾಲಿನಲ್ಲಿ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣವಾಗದಿರುವಂತಹ ಶಾಲೆಗಳಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಹಾಗೂ 2023-24ನೇ ಸಾಲಿಗೆ ಶಾಲೆಗಳು ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ದಿನಾಂಕ:02-12- 2023 ರಿಂದ ದಿನಾಂಕ:16-12-2023 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ. ಈವರೆವಿಗೂ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣ ಪಡೆದಿರುವ ಶಾಲಾ ಆಡಳಿತ ಮಂಡಳಿಗೆ ಅರ್ಜಿ ಸಲ್ಲಿಸಲು ಅಂತಿಮ ಅವಕಾಶ ನೀಡಿದ್ದು, ನಿಗದಿತ ದಿನಾಂಕದೊಳಗೆ ಸೂಕ್ತ ದಾಖಲೆಗಳೊಂದಿಗೆ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಮಾನ್ಯತೆ ಪಡೆಯುವಂತೆ ಜಿಲ್ಲಾ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ. ತಂತ್ರಾಂಶದಲ್ಲಿ ಮುಂಚಿತವಾಗಿಯೇ ಸಂಬಂಧಿಸಿದ ದಾಖಲೆಗಳನ್ನು ಅಪ್ಲೋಡ್ ಮಾಡುವಂತೆ ತಿಳಿಸುವುದು.