
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ . ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ ಕಾರಣ, ಇಂದು ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಆರು ತಿಂಗಳಲ್ಲಿ ಬೆಲೆಯೇರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಕಿಡಿಕಾರಿದೆ.
ಮುಂಬೈ ತಾಜ್ ಹೋಟೆಲ್ ಮೇಲಿನ ದಾಳಿ ಮಾದರಿಯಲ್ಲೇ ನಗರದ ಶಾಲೆಗಳ ಮೇಲೆ ಅಟ್ಯಾಕ್ ಮಾಡುವ ಬೆದರಿಕೆ, ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂಬಂತಹ ಸಂದೇಶಗಳನ್ನು ಕಳಿಸಿರುವುದು ಭಾರತೀಯರಿಗೆ ಬೆದರಿಕೆ ಒಡ್ಡುವ ಸಂದೇಶವಾಗಿದೆ. ಇದರ ಹಿಂದೆ ಯಾವುದೋ ದೊಡ್ಡ ಜಾಲವೇ ಇದ್ದಂತಿದೆ. ಸರ್ಕಾರ ಇದನ್ನು ಹಗರುವಾಗಿ ಪರಿಗಣಿಸದೆ, ಯಾರು ಈ ರೀತಿ ಸಂದೇಶ ಕಳಿಸಿದ್ದಾರೆ ಎಂಬುದನ್ನು ಶೀಘ್ರದಲ್ಲೇ ಪತ್ತೆ ಹಚ್ಚಲು ಸೂಕ್ತವಾದ ತನಿಖೆ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ @INCKarnataka ಸರ್ಕಾರ.
ಸಿಎಂ @siddaramaiah, ಡಿಸಿಎಂ @DKShivakumar, ಗೃಹ ಸಚಿವ @DrParameshwara ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ ಕಾರಣ, ಇಂದು ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ.… pic.twitter.com/oYAuXilvSg
— BJP Karnataka (@BJP4Karnataka) December 1, 2023

