alex Certify BIG NEWS: 40 ಶಾಸಕರಿಗೆ ರಾಜಕೀಯ ಕಾರ್ಯದರ್ಶಿ, ನಿಗಮ –ಮಂಡಳಿಯಲ್ಲಿ ಅವಕಾಶ: ಇಂದು ಸಂಜೆಯೊಳಗೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 40 ಶಾಸಕರಿಗೆ ರಾಜಕೀಯ ಕಾರ್ಯದರ್ಶಿ, ನಿಗಮ –ಮಂಡಳಿಯಲ್ಲಿ ಅವಕಾಶ: ಇಂದು ಸಂಜೆಯೊಳಗೆ ಪಟ್ಟಿ ಪ್ರಕಟ

ಬೆಂಗಳೂರು: ಇಂದು ಸಂಜೆಯೊಳಗೆ ನಿಗಮ –ಮಂಡಳಿ ನೇಮಕ ಆಯ್ಕೆ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಮೊದಲಿಗೆ 25 ಶಾಸಕರಿಗೆ ನಿಗಮ -ಮಂಡಳಿಗಳಲ್ಲಿ ಅವಕಾಶ ನೀಡಲಿದ್ದು, ವಿಧಾನ ಪರಿಷತ್ ನ 4-5 ಸದಸ್ಯರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.

5-8 ಶಾಸಕರನ್ನು ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಈಗಾಗಲೇ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕವಾಗಿದ್ದು, ಹೆಚ್ಚುವರಿಯಾಗಿ 5-8 ರಾಜಕೀಯ ಕಾರ್ಯದರ್ಶಿಗಳು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 3-4 ರಾಜಕೀಯ ಕಾರ್ಯದರ್ಶಿಗಳ ನೇಮಕ ಮಾಡುವ ಸಾಧ್ಯತೆ ಇದೆ.

ಒಟ್ಟು 38 – 40 ಶಾಸಕರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ನಿಗಮ –ಮಂಡಳಿ, ರಾಜಕೀಯ ಕಾರ್ಯದರ್ಶಿ ಸೇರಿದಂತೆ 38 -40 ಸ್ಥಾನಗಳಿಗೆ ನೇಮಕಾತಿ ಮಾಡಲಿದ್ದು, ಇಂದು ಸಂಜೆ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ. ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿ ಶಾಸಕರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...