ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆ ಒಟ್ಟು 48 ಠಾಣೆಗಳಲ್ಲಿ ಎಫ್ ಐ ಆರ್ ದಾಖಲಾಗಿದೆ.
ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಶಾಲಾ ಆಡಳಿತ ಮಂಡಳಿ ಎಫ್ ಐ ಆರ್ ದಾಖಲಿಸಿದೆ. ನಂತರ ವಿವಿಧ ಠಾಣೆಗಳಲ್ಲಿ ದಾಖಲಿಸಿದ ಎಫ್ ಐ ಆರ್ ನ್ನು ಕ್ರೋಢೀಕರಿಸಿ ತನಿಖೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಮಗ್ರ ತನಿಖೆಗೆ ಕೂಡ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮುಜಾಹಿದ್ದೀನ್ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಾಗಿ, ಇಲ್ಲ ಸಾಯಲು ಸಿದ್ಧರಾಗಿ. ನಿಮ್ಮನ್ನು ಹಾಗೂ ನಿಮ ಮಕ್ಕಳನ್ನು ಸಾಯಿಸುತ್ತೇವೆ. ನೀವೆಲ್ಲರೂ ಅಲ್ಲಾಹು ವಿರೋಧಿಗಳು. ಸಾಯಲು ಸಿದ್ಧರಾಗಿ’ ಎಂದು ಬೆದರಿಕೆ ಹಾಕಲಾಗಿದೆ.